ವಿಶ್ವವಿದ್ಯಾಲಯದ ಜಾಲತಾಣ ಮತ್ತು ಪರಿಚಯಪುಸ್ತಿಕೆಯ ಅನಾವರಣ

ಮೇ ೧೬, ೨೦೧೨ರಂದು ಬೆಂಗಳೂರಿನ ಅರಮನೆ ರಸ್ತೆಯ ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರೊ. ಕೆ ಎಂ ಕಾವೇರಿಯಪ್ಪನವರು (ಕಾರ್ಯನಿರ್ವಹಣಾನಿರ್ದೇಶಕ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್) ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ, www.ksu.ac.in, ಇದನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಸ್ಥಾಪನೆಯಾದ ಎರಡು ವರ್ಷಗಳಲ್ಲಿ ವಿಶ್ವವಿದ್ಯಾಲಯದ ಹೆಜ್ಜೆ ಗುರುತುಗಳನ್ನು ದಾಖಲಿಸಿರುವ ಪರಿಚಯ ಪುಸ್ತಕವೊಂದನ್ನು ಪ್ರೊ.ಎಸ್ ಸಿ ಶರ್ಮ (ಕುಲಪತಿಗಳು, ತುಮಕೂರು ವಿಶ್ವವಿದ್ಯಾಲಯ ಮತ್ತು ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್)) ರವರು ಬಿಡುಗಡೆ ಮಾಡಿದರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

Comments are closed.